
ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರದ ಕುರಿತು ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ. ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಿದರು.





