24.8 C
Udupi
Monday, September 1, 2025
spot_img
spot_img
HomeBlogಕನ್ನಡ ಸಂಘ ಕಾಂತಾವರ,ಅಲ್ಲಮಪ್ರಭು ಪೀಠ ಕಾಂತಾವರ ಅಖಿಲ ಭಾರತೀಯ ಸಾಹಿತ್ಯ ಪರಿಷದ್,ಕಾರ್ಕಳ ಸಮಿತಿ ವತಿಯಿಂದ ರಾಮಸಾಗರಗಾಮಿನೀ

ಕನ್ನಡ ಸಂಘ ಕಾಂತಾವರ,ಅಲ್ಲಮಪ್ರಭು ಪೀಠ ಕಾಂತಾವರ ಅಖಿಲ ಭಾರತೀಯ ಸಾಹಿತ್ಯ ಪರಿಷದ್,ಕಾರ್ಕಳ ಸಮಿತಿ ವತಿಯಿಂದ ರಾಮಸಾಗರಗಾಮಿನೀ

ಕೌಟುಂಬಿಕವಾಗಿ ಮಾತ್ರವಲ್ಲ ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಪರಿಕಲ್ಪನೆಯಲ್ಲಿಯೂ ಮಿಳಿತಗೊಂಡಿರುವ ಭಾವನಾತ್ಮಕ ಸಂಬಂಧಗಳ ನವಿರಾದ ವಿವರಣೆಗಳನ್ನು ರಾಮಾಯಣದಲ್ಲಿ ಕಾಣ ಬಹುದಾಗಿದೆ. ರಾಜನಾದವನು ಪಾಲಿಸಬೇಕಾದ ರಾಜ ಧರ್ಮದ ಬಗ್ಗೆಯೂ ರಾಮನು ಭರತನಿಗೆ ಬೋಧಿಸುತ್ತಾನೆ. ರಾಜಧರ್ಮದ ಈ ವಿವರಣೆಗಳು ಇಂದಿನ ರಾಜಕಾರಣಿಗಳಿಗೂ ಅನುಕರಣೆಗೆ ಅತ್ಯಂತ ಯೋಗ್ಯವಾದುದಾಗಿದೆ ಎಂಬುದಾಗಿ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಅಷ್ಟಮ ಸೋಪಾನ ‘ ಶ್ರೀರಾಮ ಸಮಾಗಮ’ ಎಂಬ ವಿಷಯದ ಕುರಿತು ಆಗಸ್ಟ್ ೩೦ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿ ಸುಲೋಚನಾ ಬಿ.ವಿ. ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page