
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಮುಂಡ್ಕೂರು ಇವರ ಸಂಯುಕ್ತ ಆಶಯದಲ್ಲಿ ನಡೆದ ಬಾಲಕರ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ತಂಡದ ಸಾಕ್ಷಿ ಶೆಟ್ಟಿ ಅತ್ಯುತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದೆ ಪಡೆದಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳ ತಂಡಕ್ಕೆ ದೈಹಿಕ ಶಿಕ್ಷಕಿ ಪ್ರಭಾವತಿ ಹೆಗ್ಡೆ ಮತ್ತು ಮುಖ್ಯ ತರಬೇತುದಾರ ಶಶಿಧರ್ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.













