
ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.
ತಂಡದ ಸಾಕ್ಷಿ ಶೆಟ್ಟಿ , ಮೇಘನಾ, ಮಂಜುಳಾ ಜಂಪ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳ ತಂಡಕ್ಕೆ ದೈಹಿಕ ಶಿಕ್ಷಕಿ ಪ್ರಭಾವತಿ ಹೆಗ್ಡೆ ಮತ್ತು ಮುಖ್ಯ ತರಬೇತುದಾರ ಶಶಿಧರ್ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.































































































































