
ಬೆಳಗಾವಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಗರದಲ್ಲಿ ನಡೆದ ಪೊಲೀಸ್ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಉತ್ತಮವಾಗಿದ್ದು ಹೂಡಿಕೆದಾರರು ಹೆಚ್ಚಾಗಿ ಬರುತ್ತಿದ್ದಾರೆ. ಕೋಮು ಗಲಭೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಸರ್ಕಾರ, ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಯುವಕರಲ್ಲಿ ಮಾದಕ ವಸ್ತು ಬಳಕೆಯನ್ನು ತಡೆಯಲು ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಅಪರಾಧಿಗಳನ್ನು ಪತ್ತೆಹಚ್ಚಲಾಗುವುದು ಎಂದರು.
ಪೊಲೀಸರಿಗಾಗಿ ಉತ್ತಮ ವಸತಿ ವ್ಯವಸ್ಥೆ ಒದಗಿಸುವ ಉದ್ದೇಶದಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಪ್ರತೀ ಮನೆಗೆ ಸುಮಾರು ₹38 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.













