29.1 C
Udupi
Wednesday, April 8, 2026
spot_img
spot_img
HomeBlogಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ 9 ದೇವಾಲಯಗಳ ಸೇವಾಶುಲ್ಕ ಏರಿಕೆ

ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ 9 ದೇವಾಲಯಗಳ ಸೇವಾಶುಲ್ಕ ಏರಿಕೆ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾ ಶುಲ್ಕವನ್ನು, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ

  • ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
  • ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
  • ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

ಚಿಕ್ಕಬಳ್ಳಾಪುರದ

  • ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
  • ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

ದಕ್ಷಿಣ ಕನ್ನಡದ

  • ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
  • ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
  • ಸೌತಡ್ಕ ಮಹಾಗಣಪತಿ ದೇವಾಲಯ
  • ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮಾರಾಳಿ

ಈ ಮೇಲಿನ ಎಲ್ಲಾ ದೇವಾಲಯಗಳ ಸೇವಾ ಶುಲ್ಕ ಏರಿಕೆ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page