29.2 C
Udupi
Thursday, June 11, 2026
spot_img
spot_img
HomeBlogಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಐಎಎಸ್, ಐಪಿಎಸ್ ಅಧಿಕಾರಿಗಳ ಸಹಕಾರ ಕೋರಿದ ಸಿಎಂ

ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಐಎಎಸ್, ಐಪಿಎಸ್ ಅಧಿಕಾರಿಗಳ ಸಹಕಾರ ಕೋರಿದ ಸಿಎಂ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ರಾತ್ರಿ ಕರ್ನಾಟಕ ಭವನದಲ್ಲಿ ಆಯೋಜಿಸಿದ್ದ ಸಂವಾದ ಹಾಗೂ ಔತಣಕೂಟದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ್ದು ಈ ವೇಳೆ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಅಧಿಕಾರಿಗಳ ಅನುಭವ ಮತ್ತು ಪರಿಣತಿಯನ್ನು ರಾಜ್ಯದ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದ ಅವರು ‘ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಲಾಭ ರಾಜ್ಯಕ್ಕೆ ದೊರೆಯುವಂತೆ ಮಾಡುವಲ್ಲಿ ನಿಮ್ಮ ಸಹಕಾರ ಬಹು ಮುಖ್ಯ. ಕರ್ನಾಟಕದಲ್ಲಿರುವ ನಿಮ್ಮದೇ ಸಹೋದ್ಯೋಗಿಗಳ ಜೊತೆ ನಿರಂತರ ಸಂಪರ್ಕ ಸಮಾಲೋಚನೆ ನಡೆಸಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ. ಬಾಕಿ ಇರುವ ಯೋಜನೆಗಳ ದ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ’ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಕರ್ನಾಟಕಕ್ಕೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ರಾಜಕೀಯ ನಾಯಕತ್ವವು ಕಾಲಕಾಲಕ್ಕೆ ಬದಲಾಗಬಹುದು. ಆದರೆ ಆಡಳಿತ ವ್ಯವಸ್ಥೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವ ಅಧಿಕಾರಿಗಳೇ ಸರ್ಕಾರದ ಕಾರ್ಯಕ್ಷಮತೆ ಮತ್ತು ಜನಪರ ಆಡಳಿತಕ್ಕೆ ಪ್ರಮುಖ ಆಧಾರವಾಗಿದ್ದಾರೆ. ರಾಜ್ಯದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page