ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಒತ್ತಾಯ…

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳುವ ಮೊದಲೇ ಸಿಎಂ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ. ಇಂತಹ ಸರಕಾರಕ್ಕೆ ಹರಿಯಾಣದಲ್ಲಿ ಅವಕಾಶ ಕೊಡ್ತೀರಾ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಯಾಣದ ವಿಧಾನಸಭಾ ಚುನಾವಣಾ ಪ್ರಚಾರ ಸಂದರ್ಭ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.
ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು ಹೈಕಮಾಂಡ್ ಭ್ರಷ್ಟಾಚಾರವಾದಾಗ ಕೆಳಗೆ ಇರುವವರಿಗೆ ಲೂಟಿ ಒಡೆಯಲು ಪರವಾನಿಗೆ ನೀಡಿದಂತಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಯಾವ ರಾಜ್ಯದಲ್ಲೂ ಅಭಿವೃದ್ಧಿಯನ್ನು ಮಾಡಿಲ್ಲ ಇನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.













