24 C
Udupi
Sunday, February 15, 2026
spot_img
spot_img
HomeBlogಕಾಂಗ್ರೆಸ್ ಸರ್ಕಾರ ಮತದಾರರಿಗೆ ವರದಾನ ಆಗೋ ಬದಲು ಶಾಪಗ್ರಸ್ತವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಮತದಾರರಿಗೆ ವರದಾನ ಆಗೋ ಬದಲು ಶಾಪಗ್ರಸ್ತವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

spot_imgspot_img

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಲೆ ಏರಿಕೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು ಈ ವೇಳೆ ಸರ್ಕಾರ ಗಾಳಿಯೊಂದನ್ನ ಬಿಟ್ಟು ಎಲ್ಲಾ ಬೆಲೆ ಏರಿಕೆ ಮಾಡಿದೆ. ಸಾಮಾನ್ಯ ಜನ, ರೈತರನ್ನ ಈ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಕಾಂಗ್ರೆಸ್‌ಗೆ ಜನ ಆಶೀರ್ವಾದ ಮಾಡಿದ್ದಾರೆ. ಆದರೆ ಈ ಸರ್ಕಾರ ಮತದಾರರಿಗೆ ವರದಾನ ಆಗೋ ಬದಲು ಶಾಪಗ್ರಸ್ತವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಹಾಲಿನ ದರ ಮೂರು ಬಾರಿ ಏರಿಕೆ ಮಾಡಿದ್ದರೂ ಈಗ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ವೆಚ್ಚವನ್ನು ಜಾಸ್ತಿ ಮಾಡಿದ್ದಾರೆ. ಹೊರ ರೋಗಿಗಳ ಶುಲ್ಕ, ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ ಜಾಸ್ತಿ ಆಗಿದೆ. ಲ್ಯಾಬ್ ಶುಲ್ಕ ಜಾಸ್ತಿ ಆಗಿದೆ. ನೋಂದಣಿ-ಮುದ್ರಾಂಕ ಶುಲ್ಕ ಜಾಸ್ತಿ ಆಗಿದೆ. ಪ್ರೊಫೆಷನಲ್ ಟ್ಯಾಕ್ಸ್ ಜಾಸ್ತಿ ಮಾಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಆಗಿದೆ. ಬೀಜಗಳ ಬೆಲೆ ಜಾಸ್ತಿ ಮಾಡಿದ್ದಾರೆ. ನೀರಿನ ದರ ಜಾಸ್ತಿ ಮಾಡಿದ್ದಾರೆ. ಈ ಸರ್ಕಾರ ಜನರಿಗೆ, ಮತದಾರರಿಗೆ ಶಾಪ ಕೊಡುವ ಕೆಲಸ ಮಾಡಿದೆ ಎಂದು ಕಿಡಿ ಕಾರಿದರು.

ರಾಜ್ಯ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದ್ದು ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ವಾಪಸ್ ಪಡೆಯಲು ಹೋರಾಟ ನಡೆಸಲಿದ್ದೇವೆ. ಏ.2ರಂದು ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಲಿದ್ದು ಹಾಲಿ ಮಾಜಿ ಶಾಸಕರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗಿಯಾಗುತ್ತಾರೆ. ಏ.5ರಂದು ರಾಜ್ಯಾದ್ಯಂತ ಹೋರಾಟ ನಡೆಯಲಿದ್ದು ಎಲ್ಲಾ ಜಿಲ್ಲೆಗಳಲ್ಲಿ ರಸ್ತೆಗೆ ಇಳಿದು ಹೋರಾಟ ಮಾಡಲಿದೆ ಎಂದು ಹೇಳಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page