
ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ(34) ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಸುಸ್ತು ಕಾಣಿಸಿಕೊಂಡಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಕೊನೆಯದಾಗಿ ದಸ್ತಕ್ ಸಿನಿಮಾದ ಪ್ರೀಮಯರ್ ಶೋನಲ್ಲಿ ಭಾಗಿಯಾಗಿದ್ದರು.
“ಮಿಸ್ ಯು ಮಗನೇ, ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ. ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ .ನೀನು ಅದರಲ್ಲಿ ಒಂದು ಶಕ್ತಿಯಾಗಿದ್ದೆ. ನಿನ್ನಂತ ಅದ್ಭುತ ವ್ಯಕ್ತಿ ನಮ್ಮ ಹೃದಯದಲ್ಲಿ ನೆಲೆಸಿರುತ್ತಾನೆ ಎಂದು ಕಾಮಿಡಿ ಕಿಲಾಡಿ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪೋಸ್ಟ್ ಮಾಡಿದ್ದಾರೆ.




















