
ಕಾರ್ಕಳದ ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಮೇಲುಗೈ ಸಾಧಿಸಿದೆ. ಈ ವರ್ಷ ಒಟ್ಟು 131 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲ 131 ವಿದ್ಯಾರ್ಥಿಗಳೂ ಉತ್ತೀರ್ಣರಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ.
ಕಾಲೇಜಿನಲ್ಲಿ 83 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ.
ಈ ಸಾಲಿನ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಅದ್ವಿತಿ ಜೈನ್ ಅವರು 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಾದ ವಿಕಾಸ್ ಜೈನ್ ಹಾಗೂ ಸುಪ್ರಜಾ 593 ಅಂಕಗಳೊಂದಿಗೆ ಕ್ರಮವಾಗಿ ರಾಜ್ಯಕ್ಕೆ 7ನೇಸ್ಥಾನ ಹಾಗೂ ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಕೊಂಡರೆ ಅಭಿಜ್ಞಾ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಕಾಲೇಜಿಗೆ ತೃತೀಯ ಸ್ಥಾನ ಪಡೆದು ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದ ಶ್ರಮ ಮಹತ್ತರವಾಗಿದೆ. ಜೊತೆಗೆ ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಹಕಾರವೂ ಈ ಯಶಸ್ಸಿಗೆ ಬಲವಾಗಿದೆ.
ಕಾಲೇಜಿನ ಈ ಸಾಧನೆಗೆ ಎಲ್ಲರೂ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶಗಳ ನಿರೀಕ್ಷೆ ವ್ಯಕ್ತವಾಗಿದೆ.








