
ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜುಲೈ 23, 2026ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಎಂ.ಎ. ಗಫೂರ್ ಉದ್ಘಾಟಿಸಲಿದ್ದು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಪಿನ್ ಚಂದ್ರ ಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖ್ಯ ಅತಿಥಿಗಳಾಗಿ ಸುರೇಂದ್ರ ಶೆಟ್ಟಿ, ಅಶ್ವಥ್ ಎಸ್.ಎಲ್., ಸುಬ್ರಹ್ಮಣ್ಯ ಜಿ. ಕುರ್ಯ ಹಾಗೂ ಅಸ್ಟ್ರೋ ಮೋಹನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಸದಸ್ಯರ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

















































