
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರು ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪರ‍್ವಾಜೆಯಲ್ಲಿ ಆಯೋಜಿಸಿದ್ದ 14ರ ವಯೋಮಿತಿಯೊಳಗಿನ ಬಾಲಕಿಯರ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.