
ಶಾಲಾ ಶಿಕ್ಷಣ ಇಲಾಖೆ , ಕರ್ನಾಟಕ ಸರ್ಕಾರ ಮತ್ತು ಹೆರ್ಗ ವಿಠಲ ಶೆಟ್ಟಿ ಪ್ರೌಢಶಾಲೆ ಕುಚ್ಚೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ಜಾವೆಲಿನ್ ಎಸೆತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, 10ನೇ ತರಗತಿಯ ಅರುಶ್ ತ್ರಿವಿಧ ಜಿಗಿತದಲ್ಲಿ, ಪ್ರಥಮ ಸ್ಥಾನ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, 10ನೇ ತರಗತಿಯ ಅಶ್ನಿ ಕೋಟ್ಯಾನ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ, 9ನೇ ತರಗತಿಯ ಚೈತ್ರ ಯು. ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಮತ್ತು 8ನೇ ತರಗತಿಯ ಅಕ್ಷಯ್ ವಾಗ್ಲೆ ಗುಂಡು ಎಸೆತದಲ್ಲಿ ಪ್ರಥಮ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ಉಡುಪಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಪಥ ಸಂಚಲನದಲ್ಲಿ ಶಾಲಾ ತಂಡಕ್ಕೆ ಪ್ರಥಮ ಸ್ಥಾನ ಲಭಿಸಿದೆ. ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.






