26.2 C
Udupi
Friday, March 13, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾದಲ್ಲಿ, ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

ಕಾರ್ಕಳ ಜ್ಞಾನಸುಧಾದಲ್ಲಿ, ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

ಕಾರ್ಕಳ ಜ್ಞಾನಸುಧಾದಲ್ಲಿ: ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇ ಸಿ ಒ ಬಾಲಕೃಷ್ಣರವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮವನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮೂಡುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಭಾಸ್ಕರ್ ಟಿ. ವಿಜ್ಞಾನದ ಮಾದರಿಗಳನ್ನು ಮಾಡುವುದರಿಂದ ಮಕ್ಕಳಲ್ಲಿ ಕುತೂಹಲ ಮೂಡಿ ವೈಜ್ಞಾನಿಕ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರು ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ವಿಜ್ಞಾನ ಮಾದರಿಗಳ ಬಗ್ಗೆ ಆಸಕ್ತಿ ವಹಿಸಿದಾಗ ಒಳ್ಳೆಯ ವೈಜ್ಞಾನಿಕ ಮನೋಭಾವ ಬೆಳೆಯಲು ಸಾಧ್ಯ ಎಂದರು.


ಮುಖ್ಯ ಅತಿಥಿಯಾಗಿದ್ದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಾಧಿಕಾರಿ ಡಾ. ಮಿಥುನ್.ಯು. ವಿಜ್ಞಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸುತ್ತಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ವಿಜ್ಞಾನ ಬದುಕಿನಲ್ಲಿ ಬಹಳ ಮುಖ್ಯ ಎಂದು ಹೇಳಿದರು. ಕಾರ್ಕಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿಜಯ ನಾರಾಯಣ ನಾಯಕ್, ಶ್ರೀ ಸಂತೋಷ್ ಕುಮಾರ್ ಶೆಟ್ಟಿ, ಪ್ರಕಾಶ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲೆಯಾದ ಶ್ರೀಮತಿ ವಾಣಿ ಕೆ, ಅಕಾಡೆಮಿಕ್ ಅಡ್ವೈಸರ್ ಶ್ರೀಮತಿ ಶಾರದಾ ಅಂಬರೀಷ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸಾಹಿತ್ಯ, ಡೀನ್ ಸ್ಟುಡೆಂಟ್ಸ್ ಅಫೇರ್ ಶಕುಂತಳಾ ಎಮ್ ಸುವರ್ಣ ಉಪಸ್ಥಿತರಿದ್ದರು. ೮ನೇ ತರಗತಿ ವಿಧ್ಯಾರ್ಥಿನಿ ಕುಮಾರಿ ಆರಾಧ್ಯ ಪ್ರಾರ್ಥಿಸಿ, ಆಂಗ್ಲ ಭಾಷಾ ಉಪನ್ಯಾಸಕಿಯಾದ ಕು. ದರ್ಶಿನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page