
ಕಾರ್ಕಳ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘದ ಸಭೆಯು ಜುಲೈ 22ರಂದು, ಕಾರ್ಕಳ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಪರಮೇಶ್ವರ ಉಪ್ಪೂರು ಇವರು ವಹಿಸಿದ್ದರು.ಸಭೆಯಲ್ಲಿ ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ಆಗುತ್ತಿರುವ ( ಪ್ಯಾಕೇಜ್ ಟೆಂಡರ್) ಸಮಸ್ಯೆ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗುತ್ತಿಗೆ ತೊಂದರೆ ಬಗ್ಗೆ ಮುಕ್ತವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಿಲ್ಲಾ ಸಂಘಟನೆಯ ಪಧಾದಿಕಾರಿಗಳು, ಮತ್ತು ಉಡುಪಿ ಜಿಲ್ಲಾ sc ಮತ್ತು st ಸಂಘದ ಉಪಾಧ್ಯಕ್ಷರು ಹಾಗೂ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ವಸಂತ ನಾಯ್ಕ್ ದುರ್ಗಾ ( ತೆಳ್ಳಾರು) , ಹೆಬ್ರಿ ವಲಯದ ಶಾಂತ,ಕಾರ್ಕಳ ತಾಲೂಕಿನ ಗುತ್ತಿಗೆದಾರರು ಉಪಸ್ಥಿತರಿದ್ದರು.
ಸಭೆಗೆ ಮೀಟಿಂಗ್ ಹಾಲ್ ನೀಡಿದ ಲೋಕೋಪಯೋಗಿ ಇಲಾಖೆ ಕಾರ್ಕಳ ಇವರಿಗೆ ಅಭಿನಂದನೆ ಸಲ್ಲಿಸಲಾಯಿತು.











