30.7 C
Udupi
Tuesday, March 10, 2026
spot_img
spot_img
HomeBlogಕಾರ್ಕಳ: ನಾಪತ್ತೆಯಾಗಿದ್ದ ವೃದ್ಧ ಶವವಾಗಿ ಪತ್ತೆ

ಕಾರ್ಕಳ: ನಾಪತ್ತೆಯಾಗಿದ್ದ ವೃದ್ಧ ಶವವಾಗಿ ಪತ್ತೆ

ಕಾರ್ಕಳ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧನೊಬ್ಬರ ಶವ ಕಸಬಾ ಗ್ರಾಮದ ವ್ಯಾಪ್ತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ರಾಮಸಮುದ್ರ ನಿವಾಸಿ ಜೋಕಿ ಪಿರೇರಾ (74) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮದ್ಯವ್ಯಾಸನಿಯಾಗಿದ್ದ ಅವರು ಮೂರ್ಛೆ ರೋಗದಿಂದ ಕೂಡ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಫೆಬ್ರವರಿ 28ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಮನೆಯಿಂದ ಕಾರ್ಕಳ ಪೇಟೆಗೆ ಹೋಗುವುದಾಗಿ ಹೇಳಿ ಹೊರಟಿದ್ದ ಅವರು ಬಳಿಕ ಮನೆಗೆ ಮರಳಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮಾರ್ಚ್ 9ರಂದು ಅವರ ಪತ್ನಿ ನತಾಲಿಯಾ ಪಿರೇರಾ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಬಳಿಕ ಹುಡುಕಾಟ ನಡೆಸಿದ ವೇಳೆ ರಾಮಸಮುದ್ರದ ಬಳಿ ಬಂಡೆ ಕಲ್ಲಿನ ಮೇಲೆ ಜೋಕಿ ಪಿರೇರಾ ಅವರ ಶವ ಪತ್ತೆಯಾಗಿದೆ. ಆದಾಗಲೇ ಶವ ಕೊಳೆಯಲಾರಂಭಿಸಿದ್ದ ಸ್ಥಿತಿಯಲ್ಲಿ ಕಂಡುಬಂದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಬಂಡೆಯಿಂದ ಬಿದ್ದು ಮೃತಪಟ್ಟಿರಬಹುದು ಅಥವಾ ಇತರ ಕಾರಣಗಳೂ ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page