
ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಬಂಗೇರ ಮತ್ತು ವ್ಯವಸ್ಥಾಪನ ಸಮಿತಿಯ ಸದ್ಯಸರ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕರಾದ ಪಿ. ಹರಿಕೃಷ್ಣ ಭಟ್ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರ ಆದೇಶದಂತೆ ವಿಶೇಷ ಪ್ರಾರ್ಥನೆ, ಪೂಜೆಯನ್ನು ಸೋಮವಾರ 12.05.2025 ರಂದು ನೆರವೇರಿಸಿದರು.
ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಗೆದ್ದು ಬರಲಿ, ದೇಶದ ವೀರ ಯೋಧರಿಗೆ ಯುದ್ಧ ಎದುರಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ, ಯೋಧರಿಗೆ ಮತ್ತವರ ಕುಟುಂಬಕ್ಕೆ ಸದಾ ದೇವರ ಅನುಗ್ರಹವಿರಲಿ ಎಂದು ಶುಭ ಹಾರೈಸಲಾಯಿತು.







