30 C
Udupi
Monday, February 23, 2026
spot_img
spot_img
HomeBlogಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

ಕಾರ್ಕಳ: ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸುರೇಶ್ ರೈ.ಕೆ ಮಾತನಾಡಿ‌ ಭಾರತ ರತ್ನ ಡಾ.ಬಿ ಆರ್ ಅಂಬೆಡ್ಕರ್ ರವರ ವಿಚಾರಧಾರೆಗಳು ವರ್ತಮಾನ ಮತ್ತು ಭವಿಷ್ಯಕ್ಕೆ ಪ್ರಸ್ತುತವಾಗಿವೆ. ದೇಶ ಕಂಡ ಅಪೂರ್ವ ಮಾನವತಾವಾದಿ ಬಾಬಾ ಸಾಹೇಬರು ಅಲ್ಲದೆ ಭಾರತ ದೇಶದ ಏಕತೆ ಮತ್ತು ಸಮಗ್ರತೆಯ ಬಹು ದೊಡ್ಡ ಪ್ರತಿಪಾದಕ ರಾಗಿದ್ದ ಅಂಬೇಡ್ಕರ್ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಜಕೀಯ ಸ್ವಾತಂತ್ರ್ಯ ವನ್ನು ಗಳಿಸುವ ಮೊದಲು ಭಾರತ ಸಾಮಾಜಿಕವಾಗಿ ವಿಮೋಚನೆಯಾಗ ಬೇಕು ಎಂದು ಆಗ್ರಹಿಸಿದ್ದರು.ಅವರು ಪ್ರತಿಪಾದಿಸಿದ ರಾಷ್ಟ್ರೀಯತೆ ರಾಜಕೀಯ ಸ್ವಾತಂತ್ರ್ಯಕ್ಕಿಂತಲೂ ಹೆಚ್ಚಾಗಿ ಸಾಮಾಜಿಕ ಸ್ವಾತಂತ್ರ್ಯ ಮತ್ತು ಸಹ ಬಾಳ್ವೆಯನ್ನು ಪ್ರತಿಪಾದಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾರತದ ಘನ ಸಂವಿಧಾನದ ಪೀಠಿಕೆಯನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮತಿ ಭಾಗ್ಯ ಲಕ್ಷ್ಮಿ ಯವರು ಪ್ರಮಾಣವಚನವನ್ನಾಗಿ ಬೋಧಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಶ್ಯಾಮ್ ಅವರು ಸಾಂದರ್ಭಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಚಂದ್ರಾವತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶ್ರೀ ಮತಿ ಸೌಮ್ಯ ಎಚ್.ಕೆ ಉಪಸ್ಥಿತರಿದ್ದರು. ಕಾರ್ಯಕ್ರಮ ವು ಅಂಬೆಡ್ಕರ್ ಅವರ ಭಾವ ಚಿತ್ತಕ್ಕೆ ಪುಷ್ಪ ಅರ್ಪಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿನಿಯರಾದ ವಿಲಾಸಿನಿ ಕಾರ್ಯಕ್ರಮ ನಿರೂಪಿಸಿದರು. ಅಲ್ಲದೆ ಅಶ್ವಿತಾ ನಾಡ ಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಹಾಗೂ ಬೋಧಕ ಹಾಗೀ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ತಿತರಿದ್ದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page