
ಕಾರ್ಕಳ: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಹಾಗೂ ವಿನಾಯಕ ಫ್ರೆಂಡ್ಸ್ ಕಾರ್ಕಳ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಜೂನ್ 14ರಂದು ನಡೆಯಲಿರುವ ಈ ಶಿಬಿರವು ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ನಡೆಯಲಿದೆ.
ರಕ್ತದಾನದ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಯಶಸ್ಸಿಗೆ ಸಹಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8762555148, 9844995365 ಹಾಗೂ 9632005240 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

































