
ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ವಾಣಿಜ್ಯ ಸಂಘ, ನಾಲೆಜ್ ಬೆಲ್ ,ಬೆಂಗಳೂರು, ಇದರ ಸಹಯೋಗದಲ್ಲಿ ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಸೆಕ್ಯುರಿಟಿ ಮಾರ್ಕೆಟ್ ನ “ಕೋನಾ ಕೋನಾ ಶಿಕ್ಷಾ” ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಪದವಿ ತರಗತಿಗಳ ಅಂತಿಮ ಬಿಕಾಂ ಮತ್ತು ಬಿಬಿಎ ತರಗತಿಯ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಶೈಕ್ಷಣಿಕ ಕಾರ್ಯಾಗಾರವು ನೆರವೇರಿತು.ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ವಾಣಿಜ್ಯ ಸಂಘ, ನಾಲೆಜ್ ಬೆಲ್ ,ಬೆಂಗಳೂರು, ಇದರ ಸಹಯೋಗದಲ್ಲಿ ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಸೆಕ್ಯುರಿಟಿ ಮಾರ್ಕೆಟ್ ನ “ಕೋನಾ ಕೋನಾ ಶಿಕ್ಷಾ” ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಪದವಿ ತರಗತಿಗಳ ಅಂತಿಮ ಬಿಕಾಂ ಮತ್ತು ಬಿಬಿಎ ತರಗತಿಯ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಶೈಕ್ಷಣಿಕ ಕಾರ್ಯಾಗಾರವು ನೆರವೇರಿತು.

ಮುಖ್ಯ ಅತಿಥಿಗಳಾಗಿದ್ದ ನಾಲೆಜ್ ಬೆಲ್ ನ ಸ್ಥಾಪಕರಾದ ವಿನೋದ್ ತಂತ್ರಿಯವರು ಮಾತನಾಡುತ್ತಾ, ನಮ್ಮ ದೇಶದ ಆರ್ಥಿಕ ಬೆಳವಣಿಗೆಯು ಬೇರೆ ದೇಶಗಳಿಗಿಂತ ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದೆ. ಈ ಬೆಳವಣಿಗೆಗೆ ಆರ್ಥಿಕತೆಯಲ್ಲಿನ ಅಭಿವೃದ್ಧಿಯೂ ಒಂದು ಕಾರಣವಾಗಿದೆ. ಈ ನಿಟ್ಟಿನಲ್ಲಿ ಹೂಡಿಕೆಯ ತಂತ್ರಾಂಶವು ಒಂದು ಮಹತ್ವದ ಪಾತ್ರ ವಹಿಸುತ್ತಿದೆ. ಇದರ ಕುರಿತ ಪ್ರಯೋಜನಗಳ ಬಗೆಗಿನ ಅರಿವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ ಮಂಜುನಾಥ ಎ ಕೋಟ್ಯಾನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೂಡಿಕೆಯ ತಂತ್ರಾಂಶಗಳ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯವಿದೆ. ಇಲ್ಲಿ ಲಭ್ಯವಾಗುವ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಈ ಕಾರ್ಯಾಗಾರವು ನಿಮ್ಮ ಭವಿಷ್ಯಕ್ಕೆ ಉಪಯೋಗವಾಗಲಿದೆ ಎಂದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕರಾದ ಪ್ರೊ. ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪ್ರೊ.ನಂದಕಿಶೋರ್ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ಶಿವಶಂಕರ್ ಆರ್.ವಂದಿಸಿದರು.



















