
. ಕಾರ್ಕಳ ಎಪ್ರಿಲ್ 14: ಕಾರ್ಕಳದ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ದಲ್ಲಿ ಸಂವಿಧಾನ ಶಿಲ್ಪಿ,ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು.





















