28.2 C
Udupi
Thursday, April 30, 2026
spot_img
spot_img
HomeBlogಕಾರ್ಕಳ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರ ಬಿಡುಗಡೆ

ಕಾರ್ಕಳ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಕಾರ್ಕಳ ತಾಲೂಕು ಘಟಕ ಇದರ ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಯಕ್ಷ ಕಲಾರಂಗದ ಅಧ್ಯಕ್ಷ ಶ್ರೀ ವಿಜಯ ಶೆಟ್ಟಿ ಅವರು ಬಿಡುಗಡೆಗೊಳಿಸಿದರು .

ಸಮ್ಮೇಳನವು ಡಿ.6 ರಂದು ನಾಲ್ಕೂರು ನರಸಿಂಗರಾಯ ಸ್ಮಾರಕ ಸರಕಾರಿ ಪ್ರೌಢಶಾಲೆ ಶಿರ್ಲಾಲು ಇದರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ನಡೆಯಲಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಜಾನಪದ ವಿದ್ವಾಂಸ ಕೆ ಗುಣಪಾಲ ಕಡಂಬ ಇವರು ವಹಿಸಲಿದ್ದಾರೆ.

ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಎಲ್ಲರನ್ನು ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಗೌರವ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಉಡುಪಿ ಜಿಲ್ಲಾ ಪ್ರತಿನಿಧಿ ಎಸ್ ನಿತ್ಯಾನಂದ ಪೈ ಶಿರ್ಲಾಲು ಪ್ರೌಢ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶೀತಲ್ ಕುಮಾರ್ ಜೈನ್ ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಭರತ್ ಜೈನ್ ಶಿರ್ಲಾಲು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ ಕೆ ಈಶ್ವರ ಮಂಗಲ ಶಿರ್ಲಾಲು ಸರಕಾರಿ ಪ್ರೌಢಶಾಲಾ ಬೆಳ್ಳಿಹಬ್ಬ ಸಮಿತಿ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಕಳ ಕಸಾಪ ಘಟಕದ ಗೌರವ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಸದಸ್ಯರುಗಳಾದ ಶಿವಸುಬ್ರಹ್ಮಣ್ಯ ಭಟ್ ತಿಪ್ಪೇಸ್ವಾಮಿ ಸುಲೋಚನಾ ಬಿ.ವಿ ಡಾ.ಸುಮತಿ ಪಿ ಮಾಲತಿ ಜಿ ಪೈ ಶೈಲಜಾ ಹೆಗಡೆ ಆಳ್ವಾಸ್. ಉಪನ್ಯಾಸಕ ಅಂಬರೀಶ್ ಚಿಪೂಳಣಕರ್ ಹಾಗೂ ಜಿಲ್ಲಾ ಮಾಧ್ಯಮ ಪ್ರತಿನಿಧಿ ನರಸಿಂಹ. ಮೂರ್ತಿ ಉಪಸ್ಥಿತರಿದ್ದರು.

ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿ ಗೌರವ ಕಾರ್ಯದರ್ಶಿ ದೇವದಾಸ ಕೆರೆಮನೆ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page