
ಉಡುಪಿ: ಕಾರ್ಕಳದ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಆರೋಪಿಗಳನ್ನು ನ್ಯಾಯಾಲಯವು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್, ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ ನನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.













