
ದಿನಾಂಕ 04.10.2025 ರಂದು ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ, ನ್ಯಾಯವಾದಿಗಳ ಸಂಘ ರಿ. ಕಾರ್ಕಳ ಹಾಗೂ ಲಯನ್ಸ್ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾರ್ಕಳದ ಲಯನ್ಸ್ ಕ್ಲಬ್ ನಲ್ಲಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಹಿರಿಯ ಸಿವಿಲ್ ಮತ್ತು ಎ.ಸಿ.ಜೆ. ಎಂ ನ್ಯಾಯಾಧೀಶರಾದ ಶ್ರೀಮತಿ ಶರ್ಮಿಳಾ ಸಿ ಎಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಲಾ| ಶ್ರೀ ರಾಜಾರಾಮ್ ಕಡಂಬ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ ಹರೀಶ್ ಅಧಿಕಾರಿ, ಅನಿಲ್ ಕುಮಾರ್ ನಿಟ್ಟೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.



















