
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ ಈ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ಒಂದೊಂದು ಕೋಟಿ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ, ಆರ್‌ಸಿಬಿ ಫ್ರಾಂಚೈಸಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.





