
ತಿರುಪತಿ: ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ತಿಮ್ಮಪ್ಪನ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ.
ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಬ್ದಾರಿತನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ಮೇಲೆಯೇ ಹೊಣೆ ಹೊರಿಸಿದ ಆಂಧ್ರಪ್ರದೇಶ ಸರ್ಕಾರವು ಡಿವೈಎಸ್‌ಪಿ ರಮಣಕುಮಾರ್ ಹಾಗೂ ಗೋಶಾಲೆ ಡಿಡಿ ಹರಿನಾಥ ರೆಡ್ಡಿ ಅವರನ್ನು ಅಮಾನತುಗೊಳಿಸಿ ಎಸ್‌ಪಿ ಸುಬ್ಬರಾಯಡು ಹಾಗೂ ಇಓ ಗೌತಮಿ, ಸಿಎಸ್ ಓ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಚಂದ್ರಬಾಬು ನಾಯ್ಡು ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಷ್ಟೇ ಅಲ್ಲದೇ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.



















