
ಉಡುಪಿ: ಜಿಲ್ಲೆಯ ಕುಂದಾಪುರ ಸಮೀಪದ ವಂಡ್ಸೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ವಂಡ್ಸೆಯ ನಿವಾಸಿ ಶಶಿಕಲಾ ಮೊಗವೀರ (50) ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ದಿನಸಿ ಖರೀದಿ ಮುಗಿಸಿ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಕಾರು ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರನ್ನು ಮಾರಣಕಟ್ಟೆ ಸಮೀಪ ನಿವಾಸಿ ಸುಖೇಶ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದು, ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.


































