
ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ವತಿಯಿಂದ ದಿನಾಂಕ 15-08-2025 ರಂದು ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ವನಮಹೋತ್ಸವ ನಡೆಸಲಾಯಿತು.
ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿನ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದಲ್ಲಿ ಪಾಲ್ಗೊಂಡು ಬಳಿಕ ಮೆರವಣಿಗೆ ನಡೆಸಲಾಯಿತು. ನಂತರ ಟಪ್ಪಾಲುಕಟ್ಟೆ ಪರಿಸರದಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ವರ್ಷಂಪ್ರತಿ ಸ್ವಾತಂತ್ರ್ಯೋತ್ಸವದಂದು ಸಂಘದ ವತಿಯಿಂದ ವನಮಹೋತ್ಸವ ಆಚರಿಸಲಾಗುತ್ತಿದೆ.
ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಂಚಾಲಕರಾದ ರಾಜೇಂದ್ರ ಕುಮಾರ್ ಬಲ್ಲಾಳ್, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತಾ ಎನ್. ರಾಜ್, ಸ್ಥಳೀಯ ಉದ್ಯಮಿ ಕಮಲಾಕ್ಷ ನಾಯಕ್ ಶಾಂತೇರಿ ಕಾಮಾಕ್ಷಿ, ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀನಿವಾಸ ಕಿಣಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
