31.9 C
Udupi
Wednesday, May 6, 2026
spot_img
spot_img
HomeBlogಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕ: ಬಿಜೆಪಿ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕ: ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ.

ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು MLC ಮಂಜುನಾಥ ಭಂಡಾರಿ ಕಾಂಗ್ರೆಸ್ ಮುಖಂಡ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಹೆಸರನ್ನು ಶಿಫಾರಸ್ಸು ಮಾಡಿದ್ದು ಆದರೆ ಹರೀಶ್ಗೆ ಅಧ್ಯಕ್ಷ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಮೇಲೆ ಅನೇಕ ಆರೋಪಗಳು ಕೇಳಿಬಂದಿದ್ದು ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪದಡಿ ಅವರನ್ನು ಬಂಧಿಸಲಾಗಿತ್ತು.

ಇದಲ್ಲದೇ ಮರಳು‌ ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ‌ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದೆ ಹರೀಶ್ ಇಂಜಾಡಿ ನೇಮಕ ಮಾಡಲಾಗಿದ್ದು ಆಡಳಿತ ಮಂಡಳಿ ಸದ್ಯಸ್ಯರಾಗಲು ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಆಗಬಾರದು ಎನ್ನುವ ನಿಯಮ ಮೀರಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ಆತ ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page