
ಕಾರ್ಕಳ: ಡಿಸೆಂಬರ್ 14ರಂದು ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನವೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಇದ್ದಕ್ಕಿದ್ದಂತೆ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ. ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದ ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
ಸ್ಥಳಕ್ಕೆ ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.