
ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇರಳದ ಮಲ್ಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ನಿಫಾ ವೈರಸ್ ಸೋಂಕಿಗೆ ಒಳಗಾಗಿ ಮೃತಪಟ್ಟ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೋಗಲಕ್ಷಣ ಕಂಡು ಬಂದರೆ ಆರೋಗ್ಯ ಇಲಾಖೆಗೆ ಸೂಚನೆ ನೀಡುವಂತೆ ತಿಳಿಸಲಾಗಿದೆ.
ಆದರೆ ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ ಆದರೂ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಎಂದು ದ. ಕ ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.











