
ಯೆಮೆನ್: ಕೊನೆಗೂ ಭಾರತ ಮತ್ತು ಯೆಮೆನ್ ಅಧಿಕಾರಿಗಳ ಸತತ ಪ್ರಯತ್ನದ ಫಲವಾಗಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ, ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ.ಪೌಲ್ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಡಾ. ಕೆ ಎ ಪೌಲ್ ಅವರು ವಿಡಿಯೋ ಸಂದೇಶದಲ್ಲಿ ಯೆಮೆನ್ ಮುಖಂಡರ ಪ್ರಭಾವಶಾಲಿ ಹಾಗೂ ಪ್ರಾರ್ಥನಾ ಪೂರ್ವಕ ಪ್ರಯತ್ನಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.