
ನವದೆಹಲಿ: ಆಂಧ್ರಪ್ರದೇಶ ಸರ್ಕಾರವು ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ಈಗ ದೇಶದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್ ಕೇಸ್ ದಾಖಲಾಗಿದೆ. ಗುಜರಾತ್ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.






















































