25 ಕೃತಿಗಳ ಅನಾವರಣ

ಕ್ರಿಯೇಟಿವ್ ಪುಸ್ತಕ ಮನೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಕನ್ನಡ ಸಾಹಿತ್ಯದ ಶ್ರೇಷ್ಠ ಕೃತಿಗಳನ್ನು ಪ್ರಕಟಿಸುವ ಹಾಗೂ ನಾಡಿನ ಹೆಸರಾಂತ ಬರಹಗಾರರು, ಚಿಂತಕರು ಮತ್ತು ಸಾಹಿತ್ಯಾಸಕ್ತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವದ ಕಾರ್ಯವನ್ನು ಮಾಡುತ್ತ ಬಂದಿದೆ.
ಈ ಪರಂಪರೆಯನ್ನು ಮುಂದುವರಿಸುತ್ತಾ, “ಕ್ರಿಯೇಟಿವ್ ಪುಸ್ತಕ ಧಾರೆ” ಮೂರನೇ ಆವೃತ್ತಿಯ ಕಾರ್ಯಕ್ರಮವನ್ನು ಜುಲೈ 19, ಭಾನುವಾರ, ಬೆಳಿಗ್ಗೆ 10:30 ಗಂಟೆಗೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ ನಾಡಿನ ಖ್ಯಾತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ್ ರಾವ್ ಅವರು, ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರು ಡಾ.ಧನಂಜಯ ಕುಂಬ್ಳೆ ಅವರು, ಹಾಗೂ ನಾಡಿನ ಅನೇಕ ಹಿರಿಯ ಸಾಹಿತಿಗಳು, ಬರಹಗಾರರು ಮತ್ತು ಸಾಹಿತ್ಯಾಭಿಮಾನಿಗಳು ಉಪಸ್ಥಿತರಿರಲಿದ್ದಾರೆ.
















































