27.2 C
Udupi
Wednesday, December 24, 2025
spot_img
spot_img
HomeBlogಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ ಹಾಗೂ ತ್ರಿಶಾ ಪದವಿಪೂರ್ವ ಕಾಲೇಜು, ಕಲ್ಯಾಣಪುರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಕಲ್ಯಾಣಪುರದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 12 ಜುಲೈ 2024ರಂದು ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ರವರು “ವಿದ್ಯಾ ದಾನವೆಂಬುದು ಶ್ರೇಷ್ಠದಾನ. ಪ್ರತಿ ಮಗುವಿನಲ್ಲಿ ಬೌದ್ಧಿಕ ಹಸಿವನ್ನು ಗುರುತಿಸಿ ಸಮರ್ಥ ಪರಿಹಾರ ಒದಗಿಸಿಕೊಡುವುದು ವೃತ್ತಿ ಧರ್ಮವಾಗಬೇಕು” ಎಂದು ಹೇಳಿದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ ಎಲ್ ರವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಥಾಪಕರಲ್ಲಿ ಒಬ್ಬರಾದ ಶ್ರೀ ಗಣಪತಿ ಭಟ್ ಕೆ ಎಸ್ ರವರು, ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಹೆಗಡೆ ರವರು, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರಶಾಂತ್ ರವರು, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿಗಳಾದ ಶ್ರೀ ಸುಧೀರ್ ಪ್ರಭುರವರು, ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸರಕಾರಿ ಪದವಿಪೂರ್ವ ಕಾಲೇಜು ಹೊನ್ನಾವರದ ಗಣಿತ ಉಪನ್ಯಾಸಕರಾದ ಶ್ರೀ ಸತೀಶ ನಾಯ್ಕರವರು “ನೀಲನಕ್ಷೆ ಪ್ರಕಾರ ಪ್ರಶ್ನೆ ಪತ್ರಿಕೆ ತಯಾರಿಕಾ ವಿಧಾನ” ದ ಕುರಿತು ಉಪನ್ಯಾಸ ನೀಡಿದರು. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶೈಕ್ಷಣಿಕ ಸಹಾಯಕ ನಿರ್ದೇಶಕರಾದ ಡಾಕ್ಟರ್ ರವಿಪ್ರಕಾಶ್ ವೈ ರವರು “ಇಂಟೆಗ್ರೇಶನ್ ಆಫ್ ಕ್ರಿಯೇಟಿವಿಟಿ ಇನ್ ಟು ಕ್ಲಾಸ್ ರೂಮ್ ಟೀಚಿಂಗ್” ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು. ಉಡುಪಿ ಜಿಲ್ಲಾ ಗಣಿತ ಉಪನ್ಯಾಸಕ ಬಳಗದವರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಗಣಿತ ಉಪನ್ಯಾಸಕರು, ತ್ರಿಶಾ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆಯವರು ಸ್ವಾಗತಿಸಿ, ಗಣಿತಶಾಸ್ತ್ರ ಉಪನ್ಯಾಸಕ ವೇದಿಕೆ ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ಸುಧೀರ್ ಪ್ರಭು ರವರು ವಂದಿಸಿ, ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮರವರು ಕಾರ್ಯಕ್ರಮ ನಿರೂಪಿಸಿದರು.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page