26 C
Udupi
Saturday, May 2, 2026
spot_img
spot_img
HomeBlogಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನವರ ಈ ವರ್ಷದ ಜಿಲ್ಲಾಮಟ್ಟದ ಶಿಕ್ಷಕರತ್ನ ಮತ್ತು ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ...

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನವರ ಈ ವರ್ಷದ ಜಿಲ್ಲಾಮಟ್ಟದ ಶಿಕ್ಷಕರತ್ನ ಮತ್ತು ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

ರೆಂಜಾಳ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸ್ವರ್ಣಲತಾ “ಕ್ರೈಸ್ಟ್ ಕಿಂಗ್ ಶಿಕ್ಷಕರತ್ನ” ಮತ್ತು


ಬೈಲೂರು ಪದವಿಪೂರ್ವ ಕಾಲೆಜಿನ ದೈಹಿಕ ಶಿಕ್ಷಣ ಶಿಕ್ಷಕ ಫ್ರೆಡ್ರಿಕ್ ರೆಬೆಲ್ಲೊ “ಕ್ರೈಸ್ಟ್ ಕಿಂಗ್ ಕ್ರೀಡಾ ಶಿಕ್ಷಕಶ್ರೀ”

ಕಾರ್ಕಳ: ಇಲ್ಲಿನ ಪ್ರತಿಷ್ಟಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನವರು ಕೊಡಮಾಡುವ ಜಿಲ್ಲಾಮಟ್ಟದ ಪ್ರಶಸ್ತಿಗಳಾದ ಕ್ರೈಸ್ಟ್ ಕಿಂಗ್ ಶಿಕ್ಷಕರತ್ನ ಹಾಗೂ
ಕ್ರೈಸ್ಟ್ ಕಿಂಗ್ ಕ್ರೀಡಾಶಿಕ್ಷಕಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ರೆಂಜಾಳ ಇಲ್ಲಿನ ಮುಖ್ಯ ಶಿಕ್ಷಕಿ ಸ್ವರ್ಣಲತಾ ಕೆ ಇವರು ಈ ಸಾಲಿನ ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅದೇ ರೀತಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕೊಡಮಾಡುವ ಕ್ರೈಸ್ಟ್ ಕಿಂಗ್ ಕ್ರೀಡಾಶಿಕ್ಷಕಶ್ರೀ ಪ್ರಶಸ್ತಿಗೆ ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ನಿವೃತ್ತ ಯೋಧ ಫ್ರೆಡ್ರಿಕ್ ರೆಬೆಲ್ಲೊ ಅವರು ಆಯ್ಕೆಯಾಗಿದ್ದಾರೆ. ನವೆಂಬರ್ ೪ರಂದು ಸಂಸ್ಥೆಯಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ಎಲ್.ಭೋಜೆಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಲೋಕೇಶ್ ಸಿ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ, ಮಿಯ್ಯಾರು ಸಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page