
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುದೀಕ್ಷಾ ಕಾಮತ್ ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಿಲ್ಲಾ ಮಟ್ಟದ ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಎರಡರಲ್ಲೂ ಬೆಳ್ಳಿ ಪದಕ ಪಡೆದುಕೊಳ್ಳುವುದರ ಮೂಲಕ ಸತತ ಎರಡನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.






















































