
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ
ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು
ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್
ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು
ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ
ವಿಭಾಗದಿಂದ ಎಂಟನೇ ತರಗತಿಯ ಮೌಲ್ಯ, ಪ್ರೌಢಶಾಲಾ ವಿಭಾಗದಿಂದ
ಒAಬತ್ತನೇ ತರಗತಿಯ ವರುಣ್ ಕಾಮತ್, ಹತ್ತನೇ ತರಗತಿಯ
ಸೋಹನ್ ಭಂಡಾರಿ ಮತ್ತು ಅಕ್ಷಿತಾ ತಾಲೂಕು ಮಟ್ಟದಲ್ಲಿ ಪ್ರಶಸ್ತಿ
ಗಳಿಸಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.































































































































