26.1 C
Udupi
Wednesday, April 22, 2026
spot_img
spot_img
HomeBlogಕ್ರೈಸ್ಟ್ ಕಿಂಗ್: ಮೊಬೈಲ್ ಸೈಬರ್ ಕ್ರೈಂ ಮತ್ತು ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಕ್ರೈಸ್ಟ್ ಕಿಂಗ್: ಮೊಬೈಲ್ ಸೈಬರ್ ಕ್ರೈಂ ಮತ್ತು ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರೋಟರಿ ಕ್ಲಬ್
ಕಾರ್ಕಳ, ಕ್ರೈಸ್ಟ್ ಕಿಂಗ್ ಇಂರ‍್ಯಾಕ್ಟ್ ಕ್ಲಬ್ ಇವರ ಸಂಯುಕ್ತ
ಆಶ್ರಯದಲ್ಲಿ ಮೊಬೈಲ್, ಸೈಬರ್ ಕ್ರೈಂ ಮತ್ತು ಮಾದಕ
ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಹೆಚ್ಚುವರಿ
ಪೊಲೀಸ್ ಅಧೀಕ್ಷಕರ ಕಛೇರಿಯ ಸಂತೋಷ್ ಅವರು
ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ
ಅವರು “ಮಾದಕ ದ್ರವ್ಯ ಸೇವನೆಯ ವಿಷಯವು ದೇಶದ
ಮುಂದಿರುವ ಸವಾಲಾಗಿದೆ, ಪೋಷಕರು ತಮ್ಮ ಮಕ್ಕಳ
ವರ್ತನೆಯ ಬಗ್ಗೆ ತೀವ್ರ ಗಮನ ಹರಿಸಬೇಕು. ಮಾದಕ ದ್ರವ್ಯ,
ಸೈಬರ್ ಹಾಗೂ ಅಪ್ರಾಪ್ತರರಿಗೆ ಸಂಬAಧಿಸಿದ ವಿಷಯಗಳಲ್ಲಿ
ಕಾನೂನು ಕಟ್ಟುನಿಟ್ಟಾಗಿದ್ದು ಮಕ್ಕಳು ಕಾನೂನಿನ ಅರಿವಿನಲ್ಲಿ
ಬದುಕಬೇಕು” ಎಂದು ಹೇಳಿದರು. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ
ರೊ.ಇಕ್ಬಾಲ್ ಅಹಮದ್ ಅವರು ವಹಿಸಿದ್ದರು. ರೋಟರಿ ಕ್ಲಬ್ ಕಾರ್ಕಳದ
ಕಾರ್ಯದರ್ಶಿ ರೊ. ಗಣೇಶ್ ಸಾಲ್ಯಾನ್, ಕ್ರೈಸ್ಟ್ ಕಿಂಗ್ ಪದವಿ ಪೂರ್ವ
ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಉಪ
ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ
ಡೊಮಿನಿಕ್ ಅಂದ್ರಾದೆ, ಸಂಸ್ಥೆಯ ಇಂರ‍್ಯಾಕ್ಟ್ ಅಧ್ಯಕ್ಷ ಒಂಬತ್ತನೇ
ತರಗತಿಯ ಅನುಷ್ ಡಿ ಶೆಟ್ಟಿ, ಕಾರ್ಯದರ್ಶಿ ಒಂಬತ್ತನೇ
ತರಗತಿಯ ವಿಶೋನ್ ಶೆಲ್ಟನ್ ಸಲ್ಡಾನ್ಹ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಕಾರ್ಕಳ ರೋಟರಿ ಕ್ಲಬ್‌ನ ಸದಸ್ಯರು
ಉಪಸ್ಥಿತರಿದ್ದರು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಶಿಕ್ಷಕಿ
ಶ್ರೀಮತಿ ಆಶಾ ಜ್ಯೋತಿ ಅವರು ಸ್ವಾಗತಿಸಿ ಕಾರ್ಯಕ್ರಮ
ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page