
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ ಜಿಲ್ಲೆ ಹಾಗೂ ಗ್ರಾಮಾಂತರ ಪ.ಪೂ ಕಾಲೇಜು, ಕನಕಪುರ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.






















































