ಪ್ರಥಮ ಪ್ರಯತ್ನದಲ್ಲಿಯೇ ಸಾಧನೆಮೆರೆದ ವಿದ್ಯಾರ್ಥಿ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) ಕಳೆದ ಜೂನ್ ನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥೀತ್ ಆರ್ ಉಪಾಧ್ಯಾಯ ಉತ್ತೀರ್ಣನಾಗಿದ್ದಾನೆ. ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿಯೇ ತರಬೇತಿ ಪಡೆದ ಪ್ರಥೀತ್ ಉಪಾಧ್ಯಾಯ ತನ್ನ ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾನೆ. ಇತ್ತೀಚೆಗೆ ಬಿಡುಗಡೆಯಾದ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿಯೂ ಪ್ರಥೀತ್ ಉಪಾಧ್ಯಾಯ ರಾಜ್ಯ ಮಟ್ಟದಲ್ಲಿ ಹತ್ತನೇ ರ‍್ಯಾಂಕ್ ಪಡದುಕೊಂಡಿದ್ದನು. ಇವನು ನಿಟ್ಟೆ ಬೋರ್ಗಲ್‌ಗುಡ್ಡೆ ಸಂತೋಷ್ ಕ್ಯಾಶ್ಯೂ ಫ್ಯಾಕ್ಟರಿ ಬಳಿಯ ನಿವಾಸಿ ರಾಘವೇಂದ್ರ ಉಪಾಧ್ಯಾಯ ಹಾಗೂ ಸುಮಂಗಲಾ ಉಪಾಧ್ಯಾಯ ಇವರ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.











