
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ ಸರಕಾರ, ಜಿಲ್ಲಾಪಂಚಾಯತ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲೆ, ಕುಂದಾಪುರ ಇಲ್ಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಸಾವನ್ ಎಸ್ ವರ್ಮ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಮುಂದೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟದಲ್ಲಿ ಸಾವನ್ ವರ್ಮ ಕರಾಟೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.













