
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಹಾಗೂ ಖ್ಯಾತ ಲೇಖಕಿ ಡಾ. ಸುಲತಾ ಹೆಬ್ರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದರು. ಅವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ತದನಂತರ ಮಾತನಾಡುತ್ತಾ ಆಧುನಿಕ ತಂತ್ರಜ್ಞಾನದಿAದ ಕನ್ನಡ ಭಾಷೆ ಅಳಿವಿನ ಅಂಚಿಗೆ ಸಾಗುತ್ತಿದೆ. ಹೀಗಾಗದೆ ಈ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಅನ್ಯ ಭಾಷೆಯ ಜೊತೆಗೆ ನಮ್ಮ ಭಾಷೆಯಾದ ಕನ್ನಡವನ್ನು ಪ್ರೀತಿಸಿ ಬೆಳೆಸುವ ಮನಸ್ಸು ನಾವು ಮಾಡಬೇಕಾಗಿದೆ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ ಅವರು ಮಾತನಾಡಿ “ನಮ್ಮ ಹೆತ್ತ ತಾಯಿಯ ಹಾಗೆ ಹೊತ್ತ ತಾಯಿಯೂ ಕೂಡ. ಹಾಗಾಗಿ ನಮ್ಮ ಉಸಿರುಸಿರಿನಲ್ಲಿ ಕನ್ನಡವನ್ನು ಬೆಳೆಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರೌಢ ಶಾಲಾ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಡಿಸೋಜ, ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಶಕೀಲಾ ಹಾಗು ಏಳನೇ ತರಗತಿಯ ವಿದ್ಯಾರ್ಥಿ ಯಶಸ್ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲರಾದ ಡಾ. ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರುಡಾಲ್ಫ ಕಿಶೋರ್ ಲೋಬೊ ಹಾಗು ಪ್ರಾಥಮಿಕ ಶಾಲಾ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಲಿನೆಟ್ ಮೆರಿನ ಡಿ’ಸೋಜರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಕನ್ನಡಾಭಿಮಾನ ಮೂಡಿಸುವ ನೃತ್ಯ ಮತ್ತು ಸಮೂಹ ಗಾಯನ ಕಾರ್ಯಕ್ರಮಗಳು ಜರುಗಿದವು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಶ್ರೀಮತಿ ಶೈಲಿ ಹೆಗ್ಡೆ ಸ್ವಾಗತಿಸಿದರು, ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾ ಅತಿಥಿಗಳನ್ನು ಪರಿಚಯಿಸಿ, ಸುಮಂಗಳ ವಂದಿಸಿದರು. ಪ್ರೌಢಶಾಲಾ ಕನ್ನಡ ಶಿಕ್ಷಕಿ ಶ್ರೀಮತಿ ರೇಖಾ ಸಂತೋಷ್ ಕಾರ್ಯಕ್ರಮ ನಿರೂಪಿಸಿರು.







