
ನವದೆಹಲಿ: ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಡಿ ಗುಕೇಶ್ ಹಾಗೂ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್ ಸೇರಿದಂತೆ ಒಟ್ಟು ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ.
ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್, ಮನು ಭಾಕರ್, ಗುಕೇಶ್ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜನವರಿ 17 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.



