
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ ಹಿಂದಿನ ಮಾದರಿಯಂತೆ ಜಿಲ್ಲಾ ಉಪನಿರ್ದೇಶಕರ ಮೂಲಕವೇ ಗೃಹಲಕ್ಷ್ಮಿ ಯೋಜನೆ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
‘ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿಲ್ಲ. ಹೀಗಾಗಿ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದು ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.



















