
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ತಾಲೂಕಿನ ಬಾಕನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ,ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಕಂತಿನ ಹಣವನ್ನು ಇನ್ನೂ ನಾಲ್ಕು ರಿಂದ ಐದು ದಿನಗಳೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ಏಪ್ರಿಲ್ ತಿಂಗಳ ಕಂತಿನ ಹಣವೂ ಮುಂದಿನ 8 ರಿಂದ 10 ದಿನಗಳೊಳಗೆ ಮಹಿಳೆಯರ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಮಾಹಿತಿ ನೀಡಿದರು.






















