32.8 C
Udupi
Sunday, April 26, 2026
spot_img
spot_img
HomeBlogಗೃಹಲಕ್ಷ್ಮಿ ಹಣ ಫಲಾನುಭವಿಗಳನ್ನು ತಲುಪಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ; ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ:...

ಗೃಹಲಕ್ಷ್ಮಿ ಹಣ ಫಲಾನುಭವಿಗಳನ್ನು ತಲುಪಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ; ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಗೃಹಲಕ್ಷ್ಮಿ ಹಣ ಪೂರೈಕೆಯಾಗದ ಕುರಿತು ಪ್ರತಿಕ್ರಿಯೆ ನೀಡಿದ್ದು ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿರಲಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಆದಷ್ಟು ಶೀಘ್ರವೇ ಪರಿಶೀಲಿಸಿ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗದ ಕಾರಣ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದು ಆದಷ್ಟು ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ| ಪುಷ್ಪ ಅಮರನಾಥ್ ಪ್ರತಿಕ್ರಿಯಿಸಿ ಕೆಲವು ತಾಂತ್ರಿಕ ಕಾರಣಗಳಿಂದ ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಸದ್ಯದಲ್ಲಿಯೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page