
ಕಾಂಗ್ರೆಸ್ ಸರಕಾರದ ಚುನಾವಣಾ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಯಾವ ರೀತಿ ಅನುಷ್ಠಾನ ಮಾಡಿದ್ದೇವೆ ಎಂದು ಕರ್ನಾಟಕಕ್ಕೆ ಬಂದು ನೋಡಿ ತನಿಖೆ ಮಾಡಿ ಎಂದು ಸವಾಲು ಎಸೆದಿದ್ದಾರೆ.
ಮೋದಿ ಕಾಂಗ್ರೆಸ್ ಭರವಸೆಗಳನ್ನು ಸುಳ್ಳು ಭರವಸೆ ಎಂದು ಹೇಳುವ ಮೂಲಕ ಜನರ ದಾರಿ ತಪ್ಪಿಸಿದ್ದರು. ಕಾಂಗ್ರೆಸ್ ಸರಕಾರ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸುಳ್ಳು ಆರೋಪ ಮಾಡಿದ್ದರು. ಕರ್ನಾಟಕದ ಚುನಾವಣೆ ಸಂದರ್ಭದಲ್ಲಿ, ನಾವು ನೀಡಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಚಾಚು ತಪ್ಪದೇ ಅನುಷ್ಠಾನಕ್ಕೆ ತಂದಿದ್ದೇವೆ .ಇದರಿಂದ ಕೋಟ್ಯಾಂತರ ಮಹಿಳೆಯರು, ಯುವಕರು,ರೈತರ, ಬದುಕಿನಲ್ಲಿ ಬದಲಾವಣೆಯಾಗಿದೆ. ಇದೇ ರೀತಿ,ಮಹಾರಾಷ್ಟ್ರದಲ್ಲೂ ಕೂಡ ನೀಡಿದ ಐದು ಗ್ಯಾರಂಟಿಗಳು ಜನರ ಬದುಕಿನಲ್ಲಿ ಬದಲಾವಣೆಯನ್ನು ತರಲಿದೆ. ಜನರಿಗೆ ಸ್ವಾಭಿಮಾನದ ಬದುಕು ಕಲ್ಪಿಸಲಿದ್ದೇವೆ ಎಂದು ತಿಳಿಸಿದ್ದಾರೆ.



















