
ಹೈದರಾಬಾದ್: ಮುಂಜಾನೆ 5:30ರ ಸುಮಾರಿಗೆ ಚಾರ್ಮಿನಾರ್ ಬಳಿಯಿರುವ ಗುಲ್ಜಾರ್ ಹೌಸ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 17 ಮಂದಿ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.
ಗುಲ್ಜಾರ್ ಹೌಸ್ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆ ವ್ಯಕ್ತವಾಗಿದ್ದು ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್, ಶೀತಲ್ ಜೈನ್, ಇರಾಜ್ ಹಾಗೂ ಅರ್ಷಾದಿ ಗುಪ್ತಾ ಎಂದು ಗುರುತಿಸಲಾಗಿದ್ದು ಅಸ್ವಸ್ಥರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ನಿಂದ ಕಾರ್ಯಾಚರಣೆ ಮುಂದುವರಿದಿದೆ. ಸಿಎಂ ರೇವಂತ್ ರೆಡ್ಡಿ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ.








